HomeLatest NewsBIG NEWS: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ...

BIG NEWS: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ಬೆಂಗಳೂರು: 77ನೇ ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಪರೇಡ್ ಗೆ ಸಿದ್ಧತೆಗಳು ಬರದಿಂದ ಸಾಗಿವೆ. ಈ ಬಾರಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಇದು ಕನ್ನಡಿಗರಿಗೆ ನಿರಾಸೆಯನ್ನುಂಟುಮಾಡಿದೆ.

ಈ ಬಾರಿ 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯಡಿ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಜ್ಯದ ಸ್ತಬ್ಧಚಿತ್ರ ಪರೇಡ್‌ನಿಂದ ಹೊರಬಿದ್ದಿದೆ.

ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಿದ್ಧಪಡಿಸಲಾಗಿತ್ತು. ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಮಾಹಿತಿ ನಿಟ್ಟಿನಲ್ಲಿ ಈ ಸ್ತಬ್ಧಚಿತ್ರ ನಿರ್ಮಿಸಲಾಗಿತ್ತು. ಕರ್ನಾಟಕವು ಕೃಷಿ ಕೈಗಾರಿಕೆ, ನಾವೀನ್ಯತೆ ಮತ್ತು ಸಂಸ್ಕೃತಿಯಲ್ಲಿ ಸಮತೋಲಿತ ಪ್ರಗತಿ ಮೂಲಕ ರಾಷ್ಟ್ರವನ್ನು ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದತ್ತ ಕೊಂಡೊಯ್ಯುತ್ತಿದೆ. ಆತ್ಮನಿರ್ಭರ ಭಾರತದ ದೃಷ್ಟಿಗೆ ಕರ್ನಾಟಕ ಸಮಗ್ರ ಕೊಡುಗೆ ನೀಡುತ್ತಿದೆ ಎಂಬುದು ಈ ಸ್ತಬ್ಧಚಿತ್ರದ ಸಂಕೇತವಾಗಿತ್ತು. ಆದರೆ ಈ ಬಾರಿ ಪಥಸಂಚಲನಕ್ಕೆ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಗದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮೈಸೂರು ಸಂಸದ ಯದುವೀರ್ ಒಡೆಯರ್, ಗಣರಾಜ್ಯೋತ್ಸವ ಪರೇಡ್​ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸುತ್ತಿಲ್ಲ. ಸರಿಯಾಗಿ ಪತ್ರ ವ್ಯವಹಾರ ನಡೆದಿಲ್ಲ, ಹಾಗಾಗಿ ಗೊಂದಲವುಂಟಾಗಿತ್ತು. ಹಾಗಾಗಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಾರಿ ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ. ಇದನ್ನು ಕರ್ನಾಟಕದ ಪ್ರತಿಯೊಬ್ಬ ಮತದಾರು ಸೂಕ್ಷ್ಮವಾಗಿ ಯೋಚಿಸಬೇಕು. ಬಿಜೆಪಿಗೆ ಮತ ಹಾಕಿದವರು ಯೋಚನೆ ಮಾಡಬೇಕು. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ? ರಾಜ್ಯದ ಪರ ಯಾರೊಬ್ಬ ಸಂಸದೂ ಧ್ವನಿ ಎತ್ತುತ್ತಿಲ್ಲ. ಜನವರಿ 26 ರಂದು ರಿಪಬ್ಲಿಕ್ ಡೇ ನಡೆಯುತ್ತೆ. 30 ಟ್ಯಾಬ್ಲೋಗಳಿಗೆ ಅವಕಾಶ ನೀಡಲಾಗಿದೆ. 17 ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಹೋಗುತ್ತವೆ. ಕೇರಳದ ಟ್ಯಾಬ್ಲೋ ಹೋಗ್ತಿದೆ. ಯಾಕಂದ್ರೆ ಅಲ್ಲಿ ಚುನಾವಣೆ ಇದೆ.ತಮಿಳುನಾಡಿನ ಟ್ಯಾಬ್ಲೋ ಹೋಗುತ್ತಿದೆ. ಅಲ್ಲಿಯೂ‌ ಚುನಾವಣೆ ಇದೆ. ಪುದುಚೇರಿಯಲ್ಲು ಚುನಾವಣೆ ಇದೆ ಹಾಗಾಗಿ ಅಲ್ಲಿನ ಟ್ಯಾಬ್ಲೋಗೂ ಅವಕಾಶ ಕೊಡಲಾಗಿದೆ. ಆದರೆ ನಮ್ಮ ಟ್ಯಾಬ್ಲೋಗೆ ಅವಕಾಶ ಸಿಕ್ಕಿಲ್ಲ. ಇದಾ ನೀವು ರಾಜ್ಯಕ್ಕೆ‌ಕೊಡುವ ಗೌರವ? ಎಂದು ಪ್ರಶ್ನಿಸಿದ್ದಾರೆ.

ಮಿಲೆಟ್ಸ್ ಟು ಮೈಕ್ರೋ ಚಿಪ್ ಟ್ಯಾಬ್ಲೋ ಇದೆ. ನಮ್ಮ ಕರ್ನಾಟಕದ್ದು, ಅದಕ್ಕೆ ಬಿಜೆಪಿಯವರು ಅಪಮಾನ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಸೋಮಣ್ಣ, ರಾಜ್ಯದ ನಾಯಕ ಯತ್ನಾಳ್ ಬೇರೆಲ್ಲ ವಿಚಾರ ಮಾತನಾಡುತ್ತಾರೆ. ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಕೊಟ್ಟಿಲ್ಲ ಇದರ ಬಗ್ಗೆ ಮಾತನಾಡಿ. ಅಶೋಕಣ್ಣ ನೀವು ಕೂಡ ಇದರ ಬಗ್ಗೆ ಮಾತನಾಡಬೇಕು. ತೇಜಸ್ವಿ ಸೂರ್ಯ ರನ್ನಿಂಗ್ ರೇಸ್ ನಲ್ಲಿದ್ದೀರ. ನೀವು ನಿಮ್ಮ ಕೇಂದ್ರ ನಾಯಕರಿಗೆ ಈ ಬಗ್ಗೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular