HomeIndiaBIG NEWS: ಕರ್ನಾಟಕಕ್ಕೆ ಬಿಗ್ ಶಾಕ್; ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸೂಚನೆ

BIG NEWS: ಕರ್ನಾಟಕಕ್ಕೆ ಬಿಗ್ ಶಾಕ್; ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸೂಚನೆ

ನವದೆಹಲಿ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತರ ಬೆಳೆಗೆ ನೀರಿಲ್ಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಬರುವ ಸ್ಥಿತಿ ಎದುರಾಗಿದೆ. ಈ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿದೆ.

ನವದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಸಧ್ಯ ಪ್ರತಿ ದಿನ 1,900 ಕ್ಯೂಸೆಕ್ ನೀರು ಹರಿಸುತ್ತಿದೆ. ಆದರೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಹೆಚ್ಚುವರಿಯಾಗಿ 3,100 ಕ್ಯೂಸೆಕ್ ನೀರು ಹರಿಸಲು ಸೂಚಿಸಿದೆ. ಬಿಳಿಗುಂಡ್ಳು ಮಾಪನ ಕೇಂದ್ರದಲ್ಲಿ 5000 ಕ್ಯೂಸೆಕ್ ನೀರು ದಾಖಲಾಗಬೇಕು ಹಾಗಾಗಿ ಹೆಚ್ಚುವರಿ ನೀರು ಹರಿಸುವುದು ಅನಿವಾರ್ಯ ಎಂದು ತಿಳಿಸಿದೆ. ನಾಳೆ ನವದೆಹಲಿಯಲ್ಲಿ CWMA ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಅಷ್ಟು ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಲಿದೆ. ನಾಳಿನ ಸಭೆಯಲ್ಲಿ ಅಂತಿಮ ತೀರ್ಮಾನ ಏನಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular