HomeIndiaBIG NEWS: ರಾಜ್ಯಕ್ಕೆ ಈ ಬಾರಿ ತೆರಿಗೆ ಪಾಲು ಶೇ.4.131ಕ್ಕೆ ಹೆಚ್ಚಳವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್...

BIG NEWS: ರಾಜ್ಯಕ್ಕೆ ಈ ಬಾರಿ ತೆರಿಗೆ ಪಾಲು ಶೇ.4.131ಕ್ಕೆ ಹೆಚ್ಚಳವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರದಿಂದ ತೆರಿಗೆ ಪಾಲಿನಲ್ಲಿಯೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನು ಶೇ.4.131ಕ್ಕೆ ಹೆಚ್ಚಳ ಮಾಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಲ್ಹಾದ್ ಜೋಶಿ, ಕರ್ನಾಟಕದ ಶೇ.3.647ರಷ್ಟಿದ್ದ ತೆರಿಗೆ ಪಾಲನ್ನು ಇದೀಗ ಶೇ.4.131ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದು ತಿಳಿಸಿದ್ದಾರೆ.

2026-27ರ ಬಜೆಟ್ ಪ್ರಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ₹63,049 ಕೋಟಿ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚೇ ತೆರಿಗೆ ಪಾಲು ರಾಜ್ಯಕ್ಕೆ ದೊರಕಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

16ನೇ ಹಣಕಾಸು ಆಯೋಗದ ವರದಿಯು ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ.41ರಲ್ಲಿಯೇ ಉಳಿಸಿಕೊಂಡಿದೆ. ತೆರಿಗೆ ಹಂಚಿಕೆಗಳಲ್ಲಿ ಬದಲಾವಣೆ ಇಲ್ಲದಿದ್ದರೂ ರಾಜ್ಯಗಳ ತೆರಿಗೆ ಹಂಚಿಕೆ ಪಾಲು ಬದಲಾಗಿದೆ. ಆ ಪ್ರಕಾರ ರಾಜ್ಯಗಳಿಗೆ ಹೆಚ್ಚೇ ತೆರಿಗೆ ಪಾಲು ಸಿಗಲಿದೆ ಎಂದು ವಿವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular