ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸ್ಲ ಝಳ ಹೆಚ್ಚಾಗುತ್ತಿದ್ದು, ತಾಪಮಾನ ಏರಿಕೆಯಾಗುತ್ತಿದೆ. ಒಣ ಹವೆಯ ಜೊತೆಗೆ ದಕ್ಷಿಣ ಒಳ ನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೆಲ ಇಲ್ಲೆಗಳಲ್ಲಿ ಸುಷ್ಕ ವಾತಾವರಣವಿದೆ. ದಕ್ಷಿನ ಒಳ ನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ದಕ್ಷಿಣ ಕನ್ನಡ , ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ,ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.
ಇಂದು ಬೆಂಗಳೂರಿನ ತಾಪಮಾನ ಕೊಂಚ ಸುಧಾರಣೆಯಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ.

