HomeLive NewsWeather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಅಪಮಾನ ಹೆಚ್ಚಳವಾಗುತ್ತಿದೆ.

ಶಿವರಾತ್ರಿ ಬಳಿಕ ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ. ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚುತ್ತಿದೆ, ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನಿಂದ ಭಾರಿ ಸೆಕೆ ಶುರುವಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಬಿಸಿಲ ಧಗೆ ಆರಂಭವಾಗಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಉಷ್ಣಾಂಶ ಹೆಚ್ಚಳವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲದಿದ್ದರೂ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular