HomeLatest Newsಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್ ಸ್ಟ್ರೋಕ್ ಭೀತಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್ ಸ್ಟ್ರೋಕ್ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲ್ವೆಡೆ ಇಂದು ಕೂಡ ಒಣಹವೆ ಮುಂದುವರೆಯಲಿದೆ.

ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಇದೇ ವಾತಾವರಣ ಮುಂದುವರಿಯಲಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.

ಬೆಂಗಳೂರು ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular