ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರ ಪರಿಹಾರ ಘೋಷಿಸಿದೆ.
ಕರ್ನೂಲ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 19 ಪ್ರಯಾಣಿಕರು ಸಜೀವದಹನವಾಗಿದ್ದರು. ಬೈಕ್ ಸವಾರ ಕೂಡ ಅಪಘಾತದಲ್ಲಿ ಮೃತಪಟ್ತಿದ್ದು ಒಟ್ಟು 20 ಜನರು ಸಾವನ್ನಪ್ಪಿದ್ದಾರೆ, 12 ಜನರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ತಲಾ 5 ಲಕ್ಷ ಪರಿಹಾರ ಘೋಷಿಸಿದೆ.
ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ದಿ ತಿಳಿಸಿದ್ದಾರೆ
