ಧಾರವಾಡ : ಹುಬ್ಬಳ್ಳಿ-ಧಾರವಾಡದ ನವನಗರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು., ಯುಜಿಸಿ ಅನುಮೋದಿತ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಸೈನ್ಸ್., ಬಿ.ಎಸ್ಸಿ., ಬಿ.ಎಸ್.ಡಬ್ಲೂ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಲಿಬ್.ಸೈನ್ಸ್., ಎಂ.ಎಸ್.ಡಬ್ಲ್ಯೂ., ಪಿಜಿ ಸರ್ಟಿಫಿಕೇಟ್., ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗೆ ಅಕ್ಟೋಬರ್ 13 ಅಂತಿಮ ದಿನಾಂಕವಾಗಿದೆ.
ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ. 9,540, ಬಿ.ಕಾಂ-ರೂ. 10,090, ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-13940, ಬಿ.ಸಿ.ಎ/ಬಿ.ಎಸ್ಸಿ-ರೂ.26,590, ಬಿ.ಎಸ್.ಡಬ್ಲ್ಯೂ-ರೂ.14,490, ಎಂ.ಎ-ರೂ.11,960, ಎಂ.ಸಿ.ಜೆ-ರೂ.18,120, ಎಂ.ಕಾಂ-ರೂ.13,940, ಎಂ.ಬಿ.ಎ-ರೂ.33,190, ಎಂ.ಎಸ್ಸಿ/ಎಂ.ಸಿ.ಎ-ರೂ.32,970, ಎಂ.ಎಸ್.ಡಬ್ಲ್ಯೂ-ರೂ.23,730 ಎಂ.ಎಲ್.ಐ.ಎಸ್ಸಿ-ರೂ.20,265 ಗಳಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ – ಧಾರವಾಡ., ಅಮರಗೋಳ 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ಕೊನೆ ಬಸ್ ನಿಲ್ದಾಣ, ನವನಗರ, ಹುಬ್ಬಳ್ಳಿ-580025. ದೂರವಾಣಿ ಸಂಖ್ಯೆ:0836-2441199/7019314679 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
* ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ: ನ್ಯಾಯಾಧೀಶ ಅಲ್ಲಪ್ಪ ಎಮ್. ಬಡಿಗೇರ
ಧಾರವಾಡ : ಜೀವನದಲ್ಲಿ ಎದುರಾಗುವ ಕಷ್ಟ-ಸಮಸ್ಯೆಗಳಿಗೆ ಆತ್ಮಹತ್ಯೆ ಯಾವುದೇ ರೀತಿಯಲ್ಲೂ ಪರಿಹಾರವಲ್ಲ. ಪ್ರತಿಯೊಬ್ಬರೂ ಆತ್ಮಹತ್ಯೆಯಂತಹ ಕೃತ್ಯಗಳಿಗೆ ಮುಂದಾಗದೆ, ಮಾನಸಿಕವಾಗಿ ಸದೃಢರಾಗಿ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಮ್. ಬಡಿಗೇರ ಅವರು ಹೇಳಿದರು.
ಅವರು ಕಾರಾಗೃಹದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರಾಗೃಹ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ವಿಭಾಗ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು.
ಕಷ್ಟದ ಸಂದರ್ಭಗಳಲ್ಲಿ ಒಂಟಿಯಾಗಿ ಸಮಸ್ಯೆಗಳನ್ನು ಎದುರಿಸುವ ಬದಲು ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಬೇಕು. ಅಗತ್ಯವಿದ್ದಲ್ಲಿ ತಜ್ಞರಿಂದ ಸೂಕ್ತ ಮಾರ್ಗದರ್ಶನ ಹಾಗೂ ನೆರವು ಪಡೆಯಬೇಕು. ಜೀವನದಲ್ಲಿ ಎದುರಾಗುವ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಿದ್ದು, ಧೈರ್ಯ ಹಾಗೂ ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ. ಅವರು ಮಾತನಾಡಿ. ವ್ಯಕ್ತಿ ಮಾನಸಿಕವಾಗಿ ದುರ್ಬಲನಾದ ಸಂದರ್ಭದಲ್ಲಿ ಆತ್ಮಹತ್ಯೆಯಂತಹ ಆಲೋಚನೆಗಳಿಗೆ ಒಳಗಾಗುವ ಸಾಧ್ಯತೆ ಇದ್ದು, ಅಂತಹ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಾನಸಿಕವಾಗಿ ಸದೃಢರನ್ನಾಗಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕ ಸಿ.ಜೆ. ರಘುಪತಿ ಅವರು ಮಾತನಾಡಿ. ಕಾರಾಗೃಹದಲ್ಲಿರುವ ಬಂದಿಗಳು ಮಾನಸಿಕವಾಗಿ ಕುಗ್ಗದೆ, ಉತ್ತಮ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಜೀವನವನ್ನು ಎದುರಿಸಿ, ಉತ್ತಮ ಚಿಂತನೆ ಹಾಗೂ ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ಸಶಕ್ತ ಜೀವನ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.ಕಾರಾಗೃಹ ಶಿಕ್ಷಕ ಡಿ.ಬಿ. ಕುಂಬಾರ ಅವರು ಸ್ವಾಗತಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎನ್. ಅಗಡಿ ವಂದಿಸಿದರು.
ಡಿಮ್ಹಾನ್ಸ್ ಸಹಾಯಕ ಪ್ರಾಧ್ಯಾಪಕಿ ಡಾ. ಮೇಘಮಾಲಾ ತಾವರಗಿ ಅವರು ಆತ್ಮಹತ್ಯೆಗೆ ಕಾರಣಗಳು ಹಾಗೂ ಅದನ್ನು ತಡೆಗಟ್ಟುವ ವಿಧಾನಗಳ ಕುರಿತು ಅವರು ಉಪನ್ಯಾಸ ನೀಡಿದರು.
ಡಾ. ಎಸ್.ಬಿ. ಕಳಸೂರಮಠ, ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ಮಹೇಶ ಚಿತ್ತರಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ, ಜಿಲ್ಲಾ ಕಾಲರಾ ಕಂಟ್ರೋಲ್ ಅಧಿಕಾರಿ ಡಾ. ಗೌರಿ ಬೆಲ್ಲದ, ತಾಲೂಕ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್, ವೈದ್ಯಾಧಿಕಾರಿ ಡಾ. ಬೀನಾ ಶೂರ್ಪಾಲಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

