ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಸೆ. 27ರಂದು ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರ ಪ್ರಚಾರ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ವಾಹನವನ್ನು ಕೂಡ ಎಫ್ಐಆರ್ ನಲ್ಲಿ ಸೇರಿಸಲಾಗಿದೆ. ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಪ್ರಚಾರ ಬಸ್ ನ ಸಮೀಪ ಬೈಕ್ ಗಳಲ್ಲಿ ಸವಾರಿ ಮಾಡುತ್ತಿದ್ದಾಗ ಪ್ರಚಾರ ವಾಹನ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಒಳಗೊಂಡಿದೆ ಎನ್ನಲಾದ ವಾಹನ ಚಾಲಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಚಾರ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.