HomeLatest News41 ಜನ ಮೃತಪಟ್ಟ ಕರೂರು ಕಾಲ್ತುಳಿತ ಕೇಸ್: ವಿಜಯ್ ವಾಹನ ಚಾಲಕನ ವಿರುದ್ಧ ಎಫ್ಐಆರ್ ದಾಖಲು

41 ಜನ ಮೃತಪಟ್ಟ ಕರೂರು ಕಾಲ್ತುಳಿತ ಕೇಸ್: ವಿಜಯ್ ವಾಹನ ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಸೆ. 27ರಂದು ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರ ಪ್ರಚಾರ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ವಾಹನವನ್ನು ಕೂಡ ಎಫ್ಐಆರ್ ನಲ್ಲಿ ಸೇರಿಸಲಾಗಿದೆ. ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಪ್ರಚಾರ ಬಸ್ ನ ಸಮೀಪ ಬೈಕ್ ಗಳಲ್ಲಿ ಸವಾರಿ ಮಾಡುತ್ತಿದ್ದಾಗ ಪ್ರಚಾರ ವಾಹನ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಒಳಗೊಂಡಿದೆ ಎನ್ನಲಾದ ವಾಹನ ಚಾಲಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಚಾರ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular