ನವದೆಹಲಿ: ಕರೂರು ಕಾಲ್ತಿಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಸಿಬಿಐ ವಿಚಾರಣೆಗೆ ಮುಗಿಸಿ ಹಿಂತಿರುಗಿದ್ದಾರೆ.
ನಟ ವಿಜಯ್ ಅವರ ರಾಜಕೀಯ ರ್ಯಾಲಿ ವೇಳೆ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತ ದಿರಂತದಲ್ಲಿ 41 ಜನರು ಮೃತಪಟ್ಟಿದ್ದರು. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2025ರ ಸೆ.27ರಂದು ಈ ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ತನಿಖೆ ಚುರುಕುಗೊಳಿಸಿರುವ ಸಿಬಿಐ ನಟ ವಿಜಯ್ ಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ನಟ ವಿಜಯ್ ದೆಹಲಿಯ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. 7 ಗಂಟೆಗೂ ಹೆಚ್ಚು ಕಾಲ ಸಿಬಿಐ ಅಧಿಕಾರಿಗಳು ವಿಜಯ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಬಳಿಕ ಸಿಬಿಐ ಕಚೇರಿಯಿಂದ ವಿಜಯ್ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ.

