ಕರೂರ್: ತಮಿಳುನಾಡಿನ ಕರೂರ್ ನಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.
ತಡರಾತ್ರಿಯೇ ಕರೂರು ಆಸ್ಪತ್ರೆಗೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ದುರಂತದಲ್ಲಿ ಇದುವರೆಗೆ 39 ಜನ ಮೃತಪಟ್ಟಿದ್ದಾರೆ. 51 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದೆ ಇಂತಹ ದುರಂತ ಸಂಭವಿಸಬಾರದು ಎಂದು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಘಟನೆ ಬಗ್ಗೆ ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
இரவு முழுவதும் உயிரிழந்தவர்களின் குடும்பத்தினர் சிந்திய கண்ணீரும், அவர்களது துக்கம் நிறைந்த அழுகுரல் ஏற்படுத்திய வலியும் என் நெஞ்சத்திலிருந்து அகலவில்லை… #KarurTragedy pic.twitter.com/Z9K2TZs7NW
— M.K.Stalin – தமிழ்நாட்டை தலைகுனிய விடமாட்டேன் (@mkstalin) September 28, 2025