ಚೆನ್ನೈ : ನಟ ವಿಜಯ್ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ನೂರಾರು ಜನರು ಗಾಯಗೊಂಡಿದ್ದಾರೆ.
ಮೃತಪಟ್ಟಿರುವ 41 ಜನರಲ್ಲಿ 35 ಜನರ ಗುರುತು ಪತ್ತೆಯಾಗಿದೆ. ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಯ ತಲಾ ಇಬ್ಬರು ಮೃತಪಟ್ಟಿದ್ದಾರೆ. ಕರೂರು ಜಿಲ್ಲೆಯವರೇ ಆದ 28 ಜನರು ಸಾವನ್ನಪ್ಪಿದ್ದಾರೆ. ಹಾಗೂ ಸೇಲಂ ನ ಓರ್ವ ಸಾವನ್ನಪ್ಪಿದ್ದಾರೆ.
ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರಲ್ಲಿ ಕರೂರು ಜಿಲ್ಲೆಯವರೇ ಹೆಚ್ಚಿದ್ದಾರೆ. ಉಳಿದವರ ಗುರುತು ಪತ್ತೆಕಾರ್ಯ ನಡೆಸಲಾಗುತ್ತಿದೆ. ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದ್ದು, ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಕರೂರಿನಲ್ಲಿ ನಡೆದ ಅವರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
The identification of those who lost their lives in the stampede currently underway. Bodies are being handed over one by one to the families.@anaghakesav reports from Karur govt hospital. Listen in for more details.#TamilNadu #Karur #Vijay #Stampede | @Akshita_N pic.twitter.com/SOAvXdkGwn
— IndiaToday (@IndiaToday) September 28, 2025