ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರ ರಾಜಕೀಯ ಪ್ರಚಾರ ಸಭೆಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 41 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಇದೀಗ ಮೊದಲ ಬಾರಿಗೆ ನಟ ವಿಜಯ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲ್ತುಳಿತ ಪ್ರಕರಣ ಸಂಭವಿಸಬಾರದಿತ್ತು. ಘಟನೆಯಿಂದ ಆಘಾತವಾಗಿದೆ. ನನ್ನ ಜೀವನದಲ್ಲಿ ಇಂತಹ ನೋವಿನ ಸಂಗತಿ ನೋಡಿರಲಿಲ್ಲ. ಘಟನೆಯಿಂದ ತುಂಬಾ ನೋವಾಗಿದೆ. ದುರಂತ ಯಾಕೆ ಸಂಭವಿಸಿತು? ಎಂಬುದು ಶೀಘ್ರದಲ್ಲಿ ಗೊತ್ತಾಗಲಿದೆ ನನ್ನನ್ನು ನೋಡಿ ಅಭಿಮಾನಿಗಳು ಪಕ್ಷದ ರ್ಯಾಲಿಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ನನ್ನನ್ನು ಟಾರ್ಗೆಟ್ ಮಾಡಿ, ಆದರೆ ಜನರನ್ನು ಟಾರ್ಗೆಟ್ ಮಾಡಬೇಡಿ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗೆ ವಿಜಯ್ ನೇರ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಿಜಯ್, ಕಾಲ್ತುತ ಘಟನೆಯಲ್ಲಿ ಗಾಯಗೊಂಡಿರುವವರನ್ನು ಶೀಘ್ರದಲ್ಲಿ ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ.