ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಂಭೀರವಾಅಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ನಟ ವಿಜಯ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಕುಟುಂಬದವರನ್ನು, ಮಕ್ಕಳನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವರು ನಟ ವಿಜಯ್ ವಿರುದ್ಧ ಸಿಡಿದೆದ್ದಿದ್ದು, ವಿಜಯ್ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮತ್ತೊಂದೆಡೆ ತಮಿಳುನಾಡು ಸ್ಟುಡೆಂಟ್ಸ್ ಯೂನಿಯನ್ ಕಾಲ್ತುಳಿತ ದುರಂತಕ್ಕೆ ನಟ ವಿಜಯ್ ಅವರೇ ನೇರ ಹೊಣೆ. ಅವರ ಮೇಲೆ ಕ್ರಮವಾಗಬೇಕು ಎಂದು ಆಗ್ರಹಿಸಿದೆ.
ಅಲ್ಲದೇ ರಕ್ತ ಹರಿಸಿದ ನಟ ವಿಜಯ್ ಬಂಧನವಾಗಬೇಕು ಎಂದು ಸ್ಟುಡೆಂಟ್ಸ್ ಯೂನಿಯನ್ ಕರೂರಿನಲ್ಲಿ ಪೋಸ್ಟರ್ ಗಳನ್ನು ಅಂಟಿಸುವ ಮೂಲಕ ಪೋಸ್ಟರ್ ಅಭಿಯಾನ ಆರಂಭಿಸಿದೆ.