ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ, 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಖೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್ಐಆರ್ ದಾಖಲಾಗಿದೆ. ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಾರ್ಯದರ್ಶಿ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಈ ನಡುವೆ ಕರೂರು ಕಾಲ್ತುಳಿತ ಪ್ರಕರಣ ಸಂಬಂಧ ಟಿವಿಕೆ ಪಕ್ಷ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದೆ.