HomeLatest NewsBREAKING: ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

BREAKING: ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಇದೇ ವೇಳೆ ಕರೂರಿನಲ್ಲಿ ಸಂಭವಿಸಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗಾಗಿ ತಲಾ 50 ಸಾವಿರ ಪರುಹಾರ ಘೋಷಣೆ ಮಾಡಿದ್ದಾರೆ.

ಇನ್ನು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್ ತಲಾ 20 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular