HomeKarnatakaಅರಬ್ಬಿ ಸಮುದ್ರದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ: 24 ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ: 24 ಮೀನುಗಾರರ ರಕ್ಷಣೆ

ಕಾರವಾರ: ಅರಬಿ ಸಮುದ್ರದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, 24 ಜನರನ್ನು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಿದ್ದು, ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್‌ ಸಮುದ್ರದಲ್ಲಿ ಮುಳುಗಿದೆ.

ಬೋಟ್‌ನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದನ್ನು ಗಮನಿಸಿದ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೋಟ್‌ನಲ್ಲಿದ್ದ 24 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೋಟ್‌ ಮುಳುಗಡೆಯಿಂದ ಮೀನುಗಾರಿಕಾ ಬೋಟ್‌ ಹಾಗೂ ಅದರಲ್ಲಿದ್ದ ಮೀನುಗಾರಿಕಾ ಪರಿಕರಗಳು ಸೇರಿದಂತೆ 80 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular