HomeKarnatakaBIG NEWS: ಶಾಲೆಗೆ ಮೀಸಲಿಟ್ಟ ಜಾಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು

BIG NEWS: ಶಾಲೆಗೆ ಮೀಸಲಿಟ್ಟ ಜಾಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಹಲವು ವರ್ಷಗಳ ಜಿಲ್ಲೆಯ ಜನತೆಯ ಬೇಡಿಕೆಗೆ ಸರ್ಕಾರ ಈ ವರ್ಷ ಸ್ಪಂದಿಸಿದ್ದು, ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ಕುಮಟಾದಲ್ಲಿ ಜಾಗವನ್ನು ಮಂಜೂರು ಮಾಡಿದೆ.

ಕುಮಾಟದಲ್ಲಿ ಸರ್ವೆ ನಂ. 440ರಲ್ಲಿ 15.35 ಎಕರೆ ಜಾಗವನ್ನು ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರ ಮಂಜೂರು ಮಾಡಿದೆ. ಆದರೆ ಈ ಜಾಗ ಏಕಲವ್ಯ ಮಾದರಿ ವಸತಿ ಶಾಲೆಗೆ ಮೀಸಲಿಟ್ಟಿದ್ದ ಜಾಗವಾಗಿತ್ತು. ಇದೇ ಜಾಗವನ್ನು ಈಗ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಪರ್ಯಾಯ ಜಾಗ ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular