384 KAS ಹುದ್ದೆಗಳ ನೇಮಕಾತಿ ಪರೀಕ್ಷೆ: ಸಂದರ್ಶನಕ್ಕೆ 25 ಅಂಕ ನಿಗದಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆಯ ಸಂದರ್ಶನಕ್ಕೆ 25 ಅಂಕ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆ ಸದಸ್ಯ ವಿಠ್ಠಲ ಸೋಮಣ್ಣ ಹಲಗೇಕರ್ ಅವರು ಕೇಳಿದ ಪ್ರಶ್ನೆಗೆ ಸದನಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಒಂದು ವರ್ಷ ಕಾಲಮಿತಿ ನಿಗದಿಪಡಿಸಲಾಗಿದೆ. ಮೂರು ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಪೂರ್ವಭಾವಿ ಪರೀಕ್ಷೆಗೆ 400 ಅಂಕ, ಮುಖ್ಯ ಪರೀಕ್ಷೆಗೆ 1250 ಅಂಕಗಳು, ಸಂದರ್ಶನಕ್ಕೆ 25 ಅಂಕ ನಿಗದಿಪಡಿಸಲಾಗಿದೆ. ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನಡೆಸುವ ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಸೇರಿ 1275 ಅಂಕಗಳು ಇರಲಿವೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read