HomeKarnatakaಇಂದು ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇಂದು ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇಂದು ನಡೆಯಲಿದೆ.

ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.

ಅಭ್ಯರ್ಥಿಗಳು ಕೆಪಿಎಸ್‍ಸಿಯಿಂದ ಡೌನ್‍ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್‍ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳು ಮೊಬೈಲ್, ಕ್ಯಾಲ್ಕುಕಲೇಟರ್, ಸ್ಮಾರ್ಟ್‍ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ತರುವಂತಿಲ್ಲ. ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಮತ್ತು ಯಾವುದೇ ದೂರುಗಳು ಬಾರದಂತೆ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನದ ವ್ಯವಸ್ಥೆ, ಬಂದೋಬಸ್ತ್ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಪತ್ರಿಕೆ-1 ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ  ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಈ ಎರಡು ಪತ್ರಿಕೆಯ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ ವ್ಯವಸ್ಥೆ  ಇರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular