ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಗುಮಾಸ್ತರ ಹುದ್ದೆಗಳಿಗೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್) ಆಗಸ್ಟ್ 25ರಂದು ಪರೀಕ್ಷೆ ನಿಗದಿಪಡಿಸಿದೆ. ಅದೇ ದಿನ ನಿಗದಿಯಾಗಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಪೂರ್ವಭಾವಿ ಪರೀಕ್ಷೆ ಮುಂದೂಡಬೇಕೆಂಬ ಅಭ್ಯರ್ಥಿಗಳ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ತಿಳಿಸಿದ್ದಾರೆ.
ಐಬಿಪಿಎಸ್ ಪರೀಕ್ಷೆ ಇರುವುದರಿಂದ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ. ಈ ಹಿಂದೆ ಐಬಿಪಿಎಸ್ ಪರೀಕ್ಷೆ ಮುಂದೂಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡುವ ಬಗ್ಗೆ ಪರಿಶೀಲಿಸಲಾಗುವು. ಅಭ್ಯರ್ಥಿಗಳ ಬಗ್ಗೆ ಕಾಳಜಿಗೆ ನಮ್ಮ ಆದ್ಯತೆ ಇದೆ ಎಂದು ತಿಳಿಸಿದ್ದಾರೆ.
I have requested @CMofKarnataka to postpone the KPSC prelims, which currently clash with the IBPS exams scheduled on the same day, Aug 25.
Previously, the State Government had written to the Central Government requesting a postponement of the IBPS exams, but we have yet to…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 1, 2024

