ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜು. 7ರ ಬದಲು ಜು. 21ಕ್ಕೆ ನಿಗದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿದ್ದ ಕೆಎಎಸ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ.

ಜುಲೈ 7ರ ಬದಲಿಗೆ ಜುಲೈ 21ರಂದು ಪರೀಕ್ಷೆ ನಿಗದಿಪಡಿಸಿ ಹೊಸದಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಈ ಮೊದಲು ಮೇ ತಿಂಗಳಲ್ಲಿ ಪೂರ್ವಭಾವಿ ಪರೀಕ್ಷೆ ನಿಗದಿಪಡಿಸಲಾಗಿತ್ತು. ಲೋಕಸಭೆ ಚುನಾವಣೆಯ ಕಾರಣಕ್ಕೆ ಮತ್ತು ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡುವ ಉದ್ದೇಶದಿಂದ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಜುಲೈ 7 ರಂದು ನಿಗದಿಪಡಿಸಲಾಗಿತ್ತು.

ಜುಲೈ 7 ರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫಒ ಪರೀಕ್ಷೆ ಇರುವುದರಿಂದ ಅನೇಕ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 21ಕ್ಕೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read