HomeKarnatakaBIG NEWS: 384 ಕೆಎಎಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ KSAT ತಡೆ

BIG NEWS: 384 ಕೆಎಎಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ KSAT ತಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ನಡೆಸಲಾಗುತ್ತಿರುವ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆ.ಎಸ್.ಎ.ಟಿ.) ಮಧ್ಯಂತರ ತಡೆ ನೀಡಿದೆ.

ಡಿ  ಪವಿತ್ರಾ ಸೇರಿದಂತೆ 51 ಅಭ್ಯರ್ಥಿಗಳು ಈ ಕುರಿತಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯ ಮಂಡಳಿ ನ್ಯಾಯಾಂಗ ಸದಸ್ಯ ಎಸ್.ವೈ. ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ಪೀಠವು ಈ ಬಗ್ಗೆ ಆದೇಶ ನೀಡಿದ್ದು, ಫೆಬ್ರವರಿ 25ಕ್ಕೆ ವಿಚಾರಣೆ ಮುಂದೂಡಲಾಗಿದೆ.

2025ರ ಜನವರಿ 30ರಂದು ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಅನುಮತಿ ನೀಡಿದ್ದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಇದೀಗ ಮುಖ್ಯ ಪರೀಕ್ಷೆ ನಡೆಸಲು ಆಯೋಗವು ಜನವರಿ 29ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿನ ವಿಚಾರಣೆಯವರೆಗೆ ಅಮಾನತಿನಲ್ಲಿ ಇರಿಸಲು ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular