HomeKarnatakaವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ

ವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ

ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಪತ್ನಿ, ವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ ಆತ್ಮಹತ್ಯೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಚೈತ್ರಾಗೌಡ ಆತ್ಮಹತ್ಯೆ ಬಳಿಕ ದೊರೆತಿದ್ದ ಡೆತ್ ನೋಟ್ ಕೂಡ ಸಾವಿಗೂ ಮುನ್ನ ಚೈತ್ರಾ ಅವರೇ ಬರೆದಿದ್ದರು ಎಂಬುದು ದೃಢವಾಗಿದೆ. ಇನ್ನು ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಮೂದಿಸಲಾಗಿದೆ.

ವಕೀಲೆ ಚೈತ್ರಾಗೌಡ ಮನೆಯಲ್ಲಿ ನೇಣುಬಿಗಿದ ರೀತಿಯಲ್ಲಿ ಮೇ 11ರಂದು ಶವವಾಗಿ ಪತ್ತೆಯಾಗಿದ್ದರು. ಈ ವೇಳೆ ಚೈತ್ರಾಗೌಡ ಮೂರು ತಿಂಗಳ ಹಿಂದೆ ಬರೆದಿದ್ದ ಡೆತ್ ನೋಟ್ ಒಂದು ಪತ್ತೆಯಾಗಿತ್ತು. ಅದರಲ್ಲಿ ತಾನು ಖಿನ್ನತೆಯಿಂದ ಬಳಲುತ್ತಿದ್ದು, ಅದರಿಂದ ಹೊರಬರಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದರು. ಇದೀಗ ವಕೀಲೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular