HomeKarnatakaBREAKING NEWS: ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಪತ್ನಿ, ವಕೀಲೆ ಶವ ಪತ್ತೆ

BREAKING NEWS: ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಪತ್ನಿ, ವಕೀಲೆ ಶವ ಪತ್ತೆ

ಬೆಂಗಳೂರು: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.

ಚೈತ್ರಾ ಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ತಮ್ಮ ಮನೆಯಲ್ಲಿ ಬೆಡ್ ರೂಮ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ ನೋಟ್  ಪತ್ತೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಎಸ್ ಅಧಿಕಾರಿ ಶಿವಕುಮಾರ್ ಪತ್ನಿ, ವೃತ್ತಿಯಲ್ಲಿ ವಕೀಲೆಯಾಗಿದ್ದ ಚೈತ್ರಾ ಗೌಡ ಸಾಮಾಜಿಕ ಚಟುವಟಿಕೆಯಲ್ಲಿಯೂ ಸಾಕಷ್ಟು ತೊಡಗಿಸಿಕೊಂಡಿದ್ದರು. ಅಲ್ಲದೇ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಇದೀಗ ಏಕಾಏಕಿ ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಾ ಗೌಡ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular