HomeIndiaBREAKING NEWS: ಕಾಶಿ ಯಾತ್ರೆಗೆ ಹೋಗಿದ್ದ ವೇಳೆ ದುರಂತ: ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ...

BREAKING NEWS: ಕಾಶಿ ಯಾತ್ರೆಗೆ ಹೋಗಿದ್ದ ವೇಳೆ ದುರಂತ: ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು

ವಾರಾಣಸಿ: ಕಾಶಿ ಯಾತ್ರೆಗೆ ಹೋಗಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

44 ವರ್ಷದ ಸತೀಶ್ ಜೋಶಿ ಮೃತ ದುರ್ದೈವಿ. ಒಂದು ವಾರದ ಹಿಂದೆ ಸತೀಶ್ ಜೋಶಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಕುಂಭಮೇಳದಲ್ಲಿ ಭಾಗಿಯಾಗಿ ಬಳಿಕ ಅಲ್ಲಿಂದ ಕಾಶಿಗೆ ತೆರಳಿದ್ದರು.

ಕಾಶಿಯಲ್ಲಿ ನದಿಯಲ್ಲಿ ಸ್ನಾನ ಮಾಡುವಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular