ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಗ್ಯಾಂಗ್ ಮತ್ತೆ ಜೈಲುಪಾಲಾಗುವುದು ಖಚಿತವಾಗಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ಈ ತೀರ್ಪಿನಿಂದ ನಮಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಗೆ ಹೆಚ್ಚಿತು ಎಂದು ಭಾವುಕರಾಗಿದ್ದಾರೆ.
ಹೈಕೋರ್ಟ್ ತೀರ್ಪಿನಿಂದ ಕಳವಳವುಂಟಾಗಿತ್ತು. ಮಗನನ್ನು ಹತ್ಯೆಗೈದ ದರ್ಶನ್ ಹಾಗೂ ಗ್ಯಾಂಗ್ ಗೆ ಸುಲಭದಲ್ಲಿ ಜಾಮೀನು ಮಂಜುರಾಗಿದ್ದು ಒಂದು ರೀತಿಯ ಆಘಾತವಾಗಿತ್ತು. ಆರೋಪಿಗಳಿಗೆ ಶಿಕ್ಷೆಯಾಗಲೇಬೇಕು ಎಂಬುದು ನಮ್ಮ ಪ್ರಾರ್ಥನೆ. ಈಗ ಸುಪ್ರೀಂ ಕೋರ್ಟ್ ಆರೋಪಿಗಳಿಗೆ ಜಾಮೀನು ರದ್ದು ಮಾಡಿರುವುದು ಸಮಾಧಾನ ತಂದಿದೆ. ನ್ಯಾಯಾಂಗ ವ್ಯವಸ್ಥೆ ಹಾಗೂ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಾಯಿತು ಎಂದು ತಿಳಿಸಿದ್ದಾರೆ.