HomeKarnatakaಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ; ಸರ್ಕಾರಿ ನೌಕರರ ಬೇಡಿಕೆ

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ; ಸರ್ಕಾರಿ ನೌಕರರ ಬೇಡಿಕೆ

ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಂತೆ ಅಕ್ಟೋಬರ್ 1, 2025ರಂದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್‌) ಜಾರಿಗೊಳಿಸಿದೆ. ಆದರೆ ಈ ಯೋಜನೆ ವಿಚಾರದಲ್ಲಿ ಸರ್ಕಾರದ ಮುಂದೆ ಮತ್ತೊಂದು ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಈಗ ಇಟ್ಟಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರನ್ನು ಭೇಟಿ ಮಾಡತ್ತು.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ OPT IN ಮತ್ತು OPT OUT ನೀಡುವ ಬಗ್ಗೆ. ಯೋಜನೆಯಲ್ಲಿ ಪತಿ, ಪತ್ನಿಯರಲ್ಲಿ ಒಬ್ಬರು ಯೋಜನೆ ವ್ಯಾಪ್ತಿಗೆ ಬರಲು ಅವಕಾಶ ನೀಡುವ ಕಡತ ಅನುಮೋದಿಸಲು ಮನವಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೌಕರರ ಬೇಡಿಕೆ ಹೀಗಿದೆ

  • ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಿಂದ ಪತಿ-ಪತ್ನಿ ಪ್ರಕರಣಗಳಲ್ಲಿ ಒಬ್ಬರಿಗೆ ಈ ಯೋಜನೆಯಿಂದ ಹೊರಗುಳಿಯಲು ಇನ್ನೊಂದು ಬಾರಿಗೆ ಅವಕಾಶ ಕಲ್ಪಿಸುವುದು.
  • ಹಾಲಿ ಈ ಯೋಜನೆಯಿಂದ ಹೊರಗುಳಿದಿರುವ ನೌಕರರು ಯೋಜನೆಗೆ ಸೇರ್ಪಡೆಗೊಳ್ಳಲು ಮತ್ತೊಮ್ಮೆ ಒಂದು ಭಾರಿಗೆ ಮಾತ್ರ ಅವಕಾಶ ನೀಡುವುದು.
  • ಮಾನ್ಯ ಮುಖ್ಯಮಂತ್ರಿಗಳ ಕಛೇರಿಯಲ್ಲಿ ಪರಿಶೀಲನೆಯಲ್ಲಿರುವ (DPAR/1/SMR/2026) ಕಡತವನ್ನು ಶೀರ್ಘವಾಗಿ ಅನುಮೋದನೆ ನೀಡುವುದು.

ಸರ್ಕಾರಿ ನೌಕರರ ಬೇಡಿಕೆಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ.

ಏನಿದು ಯೋಜನೆ?: ಕರ್ನಾಟಕ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)ಯನ್ನು ಅಕ್ಟೋಬರ್ 1, 2025ರಿಂದ ಜಾರಿಗೆ ಬರುವಂತೆ ಅನುಷ್ಠಾನಕ್ಕೆ ತಂದಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆ ಇದಾಗಿದೆ.

ಆರೋಗ್ಯ ಸೇವೆಗಳಿಗಾಗಿ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಈ ಯೋಜನೆ ಅವಕಾಶ ಕಲ್ಪಿಸುತ್ತದೆ. ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಿದೆ.

ಸರ್ಕಾರಿ ನೌಕರರ ವೇತನದಿಂದ ಮಾಸಿಕ ವಂತಿಗೆ ಕಡಿತಗೊಳಿಸಿ ಈ ಯೋಜನೆಯಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಯೋಜನೆಯಲ್ಲಿ ಹಲವು ಗೊಂದಲಗಳಿದ್ದು, ಕಾಲ ಕಾಲಕ್ಕೆ ಅದನ್ನು ಪರಿಹಾರ ಮಾಡಲಾಗುತ್ತಿದೆ.

ಸರ್ಕಾರಿ ನೌಕರರು ಈ ಯೋಜನೆಯಿಂದ ಹೊರಗೆ ಇರಲು ಬಯಸಿದರೆ ಅರ್ಜಿ ಸಲ್ಲಿಸಬೇಕಿತ್ತು. ಇದಕ್ಕಾಗಿ ಸರ್ಕಾರ ಅವಕಾಶವನ್ನು ನೀಡಿತ್ತು. ಆದರೆ ಈಗ ಸರ್ಕಾರಿ ನೌಕರರ ಸಂಘ ಯೋಜನೆ ಹೊರಗಿರುವ ನೌಕರರು ಯೋಜನೆಗೆ ಸೇರ್ಪಡೆಗೊಳ್ಳಲು ಮತ್ತೊಂದು ಅವಕಾಶ ನೀಡುವಂತೆ ಮನವಿ ಮಾಡಿದೆ.

ಸರ್ಕಾರಿ ನೌಕರರ ಮಾಸಿಕ ವೇತನದಿಂದ ಯೋಜನೆಗೆ ವಂತಿಗೆ ಕಡಿತಗೊಳಿಸಲಾಗುತ್ತದೆ. ಆದರೆ ಪತಿ, ಪತ್ನಿ ಇಬ್ಬರು ಸರ್ಕಾರಿ ನೌಕರರು ಆಗಿದ್ದರೆ ಯಾರ ವೇತನದಿಂದ ವಂತಿಗೆ ಕಡಿತಗೊಳಿಸಬೇಕು ಎಂದು ಅವರು ತಿಳಿಸಬೇಕು.

ಇದಕ್ಕಾಗಿ ಈ ಹಿಂದೆ ಅವಕಾಶ ನೀಡಲಾಗಿತ್ತು. ಈಗ ಸರ್ಕಾರಿ ನೌಕರರ ಸಂಘ ಪತಿ-ಪತ್ನಿ ಪ್ರಕರಣಗಳಲ್ಲಿ ಒಬ್ಬರಿಗೆ ಈ ಯೋಜನೆಯಿಂದ ಹೊರಗುಳಿಯಲು ಇನ್ನೊಂದು ಬಾರಿಗೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮತ್ತೊಂದು ಬಾರಿ ಮನವಿ ಸಲ್ಲಿಕೆ ಮಾಡಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೌಕರರ ಗ್ರೇಡ್‌ಗೆ ಅನುಗುಣವಾಗಿ ಮಾಸಿಕ ವಂತಿಗೆ ಕಡಿತವಾಗುತ್ತದೆ. (ಗ್ರೂಪ್‌-ಎ 1000 ರೂ., ಗ್ರೂಪ್‌-ಡಿ 250 ರೂ.). ಆಂತರಿಕ ರೋಗಿ ಸೇವೆಗಳು, ತುರ್ತು ಚಿಕಿತ್ಸೆ, ಆಂಬುಲೆನ್ಸ್ ಸೇವೆಗಳು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಕೀಮೋಥೆರಪಿ ಮುಂತಾದ ಸುಮಾರು 2000ಕ್ಕೂ ಹೆಚ್ಚು ರೋಗಗಳಿಗೆ ಚಿಕಿತ್ಸೆಯನ್ನು ಈ ಯೋಜನೆ ಒಳಗೊಂಡಿದೆ.

ಸರ್ಕಾರಿ ನೌಕರರು ಕಡ್ಡಾಯವಾಗಿ ಯೋಜನೆಗೆ ಸೇರಬೇಕಾಗಿಲ್ಲ. ಯೋಜನೆಯಲ್ಲಿ ಸೇರಬೇಕೇ ಅಥವಾ ಬೇಡವೇ ಎಂಬುದು ನೌಕರರಿಗೆ ಐಚ್ಛಿಕವಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular