HomeKarnatakaಆರೋಗ್ಯ ಸಂಜೀವಿನಿ: ಸರ್ಕಾರಿ ನೌಕರರಿಗೆ ಸುವರ್ಣ ಆರೋಗ್ಯ ಟ್ರಸ್ಟ್ ವಿಶೇಷ ಮನವಿ

ಆರೋಗ್ಯ ಸಂಜೀವಿನಿ: ಸರ್ಕಾರಿ ನೌಕರರಿಗೆ ಸುವರ್ಣ ಆರೋಗ್ಯ ಟ್ರಸ್ಟ್ ವಿಶೇಷ ಮನವಿ

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್)ಯನ್ನು ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನಿಷ್ಠಾನಗೊಳಿಸಲಾಗುತ್ತಿದೆ. ಈಗ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸರ್ಕಾರಿ ನೌಕರರಿಗೆ ವಿಶೇಷ ಮನವಿಯೊಂದನ್ನು ಮಾಡಿದೆ.

ಈ ಕುರಿತು ಉಪ ನಿರ್ದೇಶಕರು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನ ಸುವರ್ಣ ಆರೋಗ್ಯ ಮತ್ತು ಸುರಕ್ಷಾ ಟ್ರಸ್ಟ್ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಕುರಿತು ಈ ಸುತ್ತೋಲೆ ಹೊರಡಿಸಲಾಗಿದೆ.

ಸುತ್ತೋಲೆಯ ವಿವರ: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಬಂಧಪಟ್ಟಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದೂರವಾಣಿ ಸಂಖ್ಯೆ 9480819732 ಗೆ ಸರ್ಕಾರಿ ನೌಕರರು ಮತ್ತು ಅವಲಂಭಿತರು ಕರೆ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಸಂಖ್ಯೆಯು ನೋಂದಾಯಿತ ಆಸ್ಪತ್ರೆಗಳಿಂದ ತುರ್ತು ರೋಗಿಗಳಿಗೆ ಚಿಕಿತ್ಸೆಗೂ ಮುನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಅನುಮತಿ ಪಡೆಯಲು ಮಾತ್ರ ಕರೆ ಮಾಡಲು ಸಿಮೀತವಾಗಿರುತ್ತದೆ.

ಆದ್ದರಿಂದ ಸದರಿ ದೂರವಾಣಿ ಸಂಖ್ಯೆ 94808197327 ಫಲಾನುಭವಿಗಳು ಕರೆ ಮಾಡದಂತೆ ತಿಳಿಸಿದೆ. ಮುಂದುವರೆದು, ಕರ್ನಾಟಕ ಸರ್ಕಾರಿ ನೌಕರರು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಹಾಯವಾಣಿ ಸಂಖ್ಯೆ 1800-425-8330 (24/7)ಗೆ ಕರೆ ಮಾಡಲು ಮತ್ತು Whats up ಸಂಖ್ಯೆ 9480819777ಗೆ ಸಂದೇಶ/ ದೂರುಗಳನ್ನು ದಾಖಲಿಸಲು ಕೋರಿದೆ ಎಂದು ಹೇಳಿದ್ದಾರೆ.

ಏನಿದು ಯೋಜನೆ?: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಅಕ್ಟೋಬರ್ 1, 2025ರಿಂದ ಜಾರಿಗೆ ಬಂದಿದೆ. ಯೋಜನೆ ವ್ಯಾಪ್ತಿಗೆ ಬರುವ ಸರ್ಕಾರಿ ನೌಕರರ ವೇತನದಿಂದ ಮಾಸಿಕ ವಂತಿಗೆ ಕಡಿತವಾಗುತ್ತಿದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸುವ ಯೋಜನೆ ಇದಾಗಿದೆ. ಆದರೆ ಯೋಜನೆ ಜಾರಿಗೆ ಬಂದ ಬಳಿಕ ಹಲವು ಗೊಂದಲಗಳಿದ್ದು, ಸರ್ಕಾರಿ ನೌಕರರ ಸಂಘ ಈ ಗೊಂದಲ ಬಗೆಹರಿಸಲು ಪ್ರಯತ್ನಗಳನ್ನು ಮಾಡುತ್ತಿದೆ.

ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಕಟಣೆಯಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಸಂಬಂಧಿಸಿದಂತೆ ದಿನದ 24 ಗಂಟೆಗಳ ಸೇವೆ ಕರೆ/ ವಾಟ್ಸಪ್ ಸಂದೇಶಕ್ಕಾಗಿ ಈ ಸಂಖ್ಯೆಗಳಿಗೆ ಕರೆ ಮಾಡಿ ಎಂದು ಸಂಖ್ಯೆಗಳನ್ನು ನೀಡಿದೆ.

ಸರ್ಕಾರಿ ನೌಕರರು 1800-425-8330 ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ 9480819777 ಸಂಖ್ಯೆಗೆ ವಾಟ್ಸಪ್ ಸಂದೇಶವನ್ನು ಕಳಿಸಬಹುದು. ಈ ಸಂಖ್ಯೆಗೆ ಕರೆ ಮಾಡುವಂತಿಲ್ಲ ಎಂದು ತಿಳಿಸಿದೆ.

ಈ ಯೋಜನೆ ಕುರಿತು ಈಗಾಗಲೇ ಸರ್ಕಾರಿ ನೌಕರರಿಗೆ ಮಾಹಿತಿಗಳನ್ನು ನಿರಂತರವಾಗಿ ಸುವರ್ಣ ಆರೋಗ್ಯ ಟ್ರಸ್ಟ್ ಮತ್ತು ಸರ್ಕಾರಿ ನೌಕರರ ಸಂಘದ ಮೂಲಕ ನೀಡಲಾಗುತ್ತಿದೆ. ಆದರೆ ಯೋಜನೆ ವಿಚಾರದಲ್ಲಿ ಕೆಲವು ಗೊಂದಲಗಳಿವೆ.

ಯೋಜನೆಗೆ ಸರ್ಕಾರಿ ನೌಕರರ ಮಾಸಿಕ ವಂತಿಕೆ ಪಾವತಿ ಬಗ್ಗೆ ಮಾಹಿತಿ ನೀಡಲಾಗಿದ್ದು, ಮಾಸಿಕ ವಂತಿಕೆಯನ್ನು ಪಾವತಿಸುವ ವಿಧಾನವನ್ನು ತಿಳಿಸಲಾಗಿದೆ. ಯೋಜನೆಯಡಿ ಸರ್ಕಾರಿ ನೌಕರರ ವೇತನದಿಂದ ಕಡಿತಗೊಳಿಸಲ್ಪಟ್ಟ ವಂತಿಕೆಯನ್ನು ಎಲ್ಲಾ ಡಿಡಿಓಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಈ ಉದ್ದೇಶಕ್ಕಾಗಿಯೇ ತೆರೆಯಲಾದ ಖಾತೆಗೆ ಖಜಾನೆ-2 ರಲ್ಲಿ ಸೃಜಿಸಲಾಗುವ ಸ್ವೀಕೃತಿದಾರರ ಐಡಿ (ID) ಗೆ ಜಮಾ ಮಾಡತಕ್ಕದ್ದು ಎಂದು ಹೇಳಿದೆ.

ಸರ್ಕಾರಿ ನೌಕರನ ಪತಿ ಅಥವಾ ಪತ್ನಿ ಕೂಡ ಸರ್ಕಾರಿ ನೌಕರರಾಗಿರುವಲ್ಲಿ ವಂತಿಕೆಯನ್ನು ಪಾವತಿಸುವ ಬಗ್ಗೆಯೂ ಸ್ಪಷ್ಟನೆ ನೀಡಲಾಗಿದೆ. ವಂತಿಕೆಯನ್ನು ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರು ಪಾವತಿಸುವ ಬಗ್ಗೆ ಸಂಬಂಧಪಟ್ಟ ಸರ್ಕಾರಿ ನೌಕರರೇ ತೀರ್ಮಾನಿಸಿ ಸಂಬಂಧಿಸಿದ ಡಿಡಿಒ ಅವರಿಗೆ ಮಾಹಿತಿ ನೀಡುವುದು ಎಂದು ತಿಳಿಸಿದೆ.

HRMS ವ್ಯಾಪ್ತಿಯಲ್ಲಿರದ (ಬೇರೆ ಇಲಾಖೆಗಳಲ್ಲಿ, ಸಾರ್ವಜನಿಕ ಸಂಸ್ಥೆಗಳಲ್ಲಿ ನಿಯೋಜನೆ, ಅನ್ಯ ಸೇವೆ) ರಾಜ್ಯ ಸರ್ಕಾರಿ ನೌಕರರ ವಂತಿಕೆ ಕಟಾವಣೆ ಕುರಿತು ಸ್ಪಷ್ಟನೆ ನೀಡಲಾಗಿದ್ದು, ಅಂತಹ ನಿಯೋಜಿತ ನೌಕರರ ಮಾಸಿಕ ವೇತನದಲ್ಲಿ ವಂತಿಕೆಯನ್ನು ಕಟಾಯಿಸಿ, ಸಂಸ್ಥೆಯಿಂದ ನೇರವಾಗಿ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದು ಎಂದು ಹೇಳಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular