HomeKarnatakaಶಿಕ್ಷಕರ ನೇಮಕಾತಿ: ತಂದೆಯ ಆದಾಯ ಪ್ರಮಾಣ ಪತ್ರ ಪರಿಗಣಿಸುವ ಅರ್ಜಿ ವಜಾ: KAT ಆದೇಶ

ಶಿಕ್ಷಕರ ನೇಮಕಾತಿ: ತಂದೆಯ ಆದಾಯ ಪ್ರಮಾಣ ಪತ್ರ ಪರಿಗಣಿಸುವ ಅರ್ಜಿ ವಜಾ: KAT ಆದೇಶ

ಬೆಂಗಳೂರು: ಶಿಕ್ಷಕರ ನೇಮಕಾತಿ ಸಂಬಂಧ ತಂದೆಯ ಆದಾಯ ಪ್ರಮಾಣ ಪತ್ರ ಮಾತ್ರ ಪರಿಗಣಿಸಬೇಕು ಎಂದು ಕೋರಿ ಕೆಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ತಿರಸ್ಕರಿಸಿದೆ.

ಬೆಂಗಳೂರಿನ ನಳಿನ ಮೊದಲಾದವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯ ನಾರಾಯಣ ಮತ್ತು ಆಡಳಿತ ಸದಸ್ಯರ ಎನ್. ಶಿವಶೈಲಂ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಈ ಅಭ್ಯರ್ಥಿಗಳು ಮತ್ತೆ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಮತ್ತು ಯೋಗೇಶ್ವರಿ ನಡುವಿನ ಪ್ರಕರಣದಲ್ಲಿ ಪೋಷಕರ ಆದಾಯ ಪ್ರಮಾಣ ಪತ್ರವನ್ನೇ ಪರಿಗಣಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದಲ್ಲಿಯೂ ಅರ್ಜಿದಾರರು ಸಲ್ಲಿಸಿದ ತಂದೆಯ ಆದಾಯ ಪ್ರಮಾಣ ಪತ್ರ ಪರಿಗಣಿಸಿ ಆಯ್ಕೆ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮತ್ತು ಕೌನ್ಸಿಲಿಂಗ್ ಅವಕಾಶ ಮಾಡಿಕೊಡುವಂತೆ ಆದೇಶ ನೀಡುವಂತೆ ಮನವಿ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular