ಬೆಂಗಳೂರು: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ.
ರಾಯಚೂರಿನ ಲಿಂಗಸಗೂರಿನಲ್ಲಿ ನಡೆದಿದ್ದ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಪ್ರವೀಣ್ ಕುಮಾರ್ ಎಂಬುವವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಪ್ರವೀಣ್ ಕುಮಾರ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಮೊರೆ ಹೋಗಿದ್ದರು. ಅರ್ಜಿದಾರ ಪ್ರವೀಣ್ ಕುಮಾರ್ ಪರ ಹಿರಿಯ ವಕೀಲಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು. ರಾಜಕೀಯ ಒತ್ತಡದಿಂದಾಗಿ ಕಾನೂನು ಬಾಹಿರ ಕ್ರಮ ಕೈಗೊಳ್ಳಲಾಗಿದೆ ಎಂದು ವಾದಿಸಿದ್ದರು.
ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಆಡಳಿತಾಅತ್ಮಕ ನ್ಯಾಯಮಂಡಳಿ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ಸರ್ಕಾರ ಹೊರಡಿಸಿದ್ದ ಅಮಾನತು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
