ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ‘ಬಾಹುಬಲಿ’ ಪ್ರಭಾಸ್

ಮಂಗಳೂರು: ‘ಸಲಾರ್’ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.

ದೇವರಿಗೆ ಎರಡು ಅಟ್ಟೆ ಮಲ್ಲಿಗೆ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಅರ್ಚಕ ಅನಂತಪದ್ಮನಾಭ ಆಸ್ರಣ್ಣರು ಪ್ರಭಾಸ್ ಗೆ ಪ್ರಸಾದ, ಶೇಷ ವಸ್ತ್ರ, ದೇವರ ಫೋಟೋ ನೀಡಿ ಹರಸಿದ್ದಾರೆ. ಪ್ರಭಾಸ್ ಮೂಲ್ಕಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಖ್ಯಾತ ನಿರ್ಮಾಪಕ ಹೊಂಬಾಳೆ ಫಿಲಂಸ್ ನ ವಿಜಯ ಕಿರಗಂದೂರು ಮೊದಲಾದವರು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read