HomeEntertainment'ಕಾಟೇರ' ಚಿತ್ರದ ಲಿರಿಕಲ್ ಹಾಡು ರಿಲೀಸ್

‘ಕಾಟೇರ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ‘ಕಾಟೇರ’ ಸಿನಿಮಾದ ಲಿರಿಕಲ್ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.”ಯಾವ ಜನುಮದ ಗೆಳತಿ” ಎಂಬ ಈ ಹಾಡಿಗೆ ಹೇಮಂತ್ ಕುಮಾರ್ ಮತ್ತು ರಕ್ಷಿತ ಸುರೇಶ್ ಧ್ವನಿಯಾಗಿದ್ದು, ಡಾ; ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಈ ಚಿತ್ರದಲ್ಲಿ ದರ್ಶನ್ ಮತ್ತು ಆರಾಧನಾ ಪ್ರಮುಖ ಪಾತ್ರದಲ್ಲಿದ್ದು, ಕುಮಾರ್ ಗೋವಿಂದ್, ಶ್ರುತಿ, ಜಗಪತಿ ಬಾಬು, ಮಾಸ್ಟರ್ ರೋಹಿತ್, ಬಿರಾದಾರ್, ತೆರೆ ಹಂಚಿಕೊಂಡಿದ್ದಾರೆ. ಇನ್ನುಳಿದಂತೆ ವಿ ಹರಿಕೃಷ್ಣ ಸಂಗೀತವಿದ್ದು, ಕೆ ಎಂ ಪ್ರಕಾಶ್ ಸಂಕಲವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular