HomeEntertainmentಶೀಘ್ರದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗಲಿದೆ 'ಕಾಟೇರ'

ಶೀಘ್ರದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಕಾಟೇರ’

ಕಳೆದ ವರ್ಷ ಡಿಸೆಂಬರ್ 29ರಂದು ರಾಜ್ಯದ್ಯಂತ ತೆರೆಕಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ  ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುವ ಮೂಲಕ ಸ್ಯಾಂಡಲ್ವುಡ್ ನಲ್ಲಿ ಹೊಸ ದಾಖಲೆ ಬರೆದಿತ್ತು. ಕೇವಲ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ ಈ ಸಿನಿಮಾ ಕಥೆಗೆ ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದರು. ಕಾಟೇರ ಚಿತ್ರ ಇದೀಗ ಜೀ ಕನ್ನಡ ವಾಹಿನಿಯಲ್ಲಿ ಶೀಘ್ರದಲ್ಲೇ ಪ್ರಸಾರವಾಗಲಿದೆ. ಈ ಕುರಿತು ಜೀ ಕನ್ನಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.

ತರುಣ್ ಸುಧೀರ್ ಮತ್ತು ಜಡೇಶ್ ಕೆ ಹಂಪಿ ಈ ಚಿತ್ರದ ಕಥೆ ಬರೆದಿದ್ದು, ತರುಣ್ ಸುಧೀರ್ ಅವರೇ ನಿರ್ದೇಶನ ಮಾಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಅಭಿನಯಿಸಿದ್ದು, ಜಗಪತಿ ಬಾಬು, ಕುಮಾರ್ ಗೋವಿಂದ್, ಶ್ರುತಿ, ಪದ್ಮ ವಾಸಂತಿ, ಮಾಸ್ಟರ್ ರೋಹಿತ್, ಅವಿನಾಶ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ ಸುಧಾಕರ್ ರಾಜ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular