BREAKING : ಕಟ್ಟಿಗೆ ಹಳ್ಳಿ ಮಠದ ‘ಡಾ. ಮಹಾಂತೇಶ್ವರ ಮಹಾಸ್ವಾಮೀಜಿ’ ಲಿಂಗೈಕ್ಯ

ಹಾವೇರಿ :  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಕಟಗೆಹಳ್ಳಿಮಠದ ಡಾ ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಾ.ಮಹಾಂತೇಶ್ವರ ಸ್ವಾಮೀಜಿ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಲಿಂಗೈಕ್ಯರಾಗಿದ್ದಾರೆ.

ಪಾರ್ಥಿವ ಶರೀರದ ಅಂತ್ಯಕ್ರಿಯೆ ವೀರಶೈವ ಪದ್ಧತಿಯಂತೆ ಶನಿವಾರ ಸಂಜೆ 4.30ಕ್ಕೆ ಚಳಗೇರಿಯ ಕಟ್ಟಿಗೆ ಹಳ್ಳಿ ಮಠದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.ಅರವಿಂದ್ ಘೋಷ್ ಅವರ ಬಗ್ಗೆ ಸಂಶೋಧನೆ ಮಾಡಿದ್ದ ಸ್ವಾಮೀಜಿ ಗೌರವ ಡಾಕ್ಟರೇಟ್ ಪಡೆದಿದ್ದರು. ಶ್ರೀಗಳು ನಿಧನರಾದ ಹಿನ್ನೆಲೆ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read