50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿರುವ ‘ಕೌಸಲ್ಯ ಸುಪ್ರಜಾ ರಾಮ’

Kousalya Supraja Rama' movie review: An engaging take on the perils of male ego - The Hindu

ಶಶಾಂಕ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಜುಲೈ 28ರಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಈ ಚಿತ್ರ ಬಿಡುಗಡೆ ಆದಾಗಿನಿಂದ ಇಂದಿನವರೆಗೂ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಈ ಚಿತ್ರ ಇದೀಗ 50 ದಿನಗಳನ್ನು ಪೂರೈಸಿದ್ದು, ಡಾರ್ಲಿಂಗ್ ಕೃಷ್ಣ  ಹಾಗೂ ನಿರ್ದೇಶಕ ಶಶಾಂಕ್ ಈ ಸಂತಸವನ್ನು ತಮ್ಮ instagram ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ. ಫ್ಯಾಮಿಲಿ ಹಾಗೂ ಲವ್ ಸ್ಟೋರಿ ಸಿನಿಮಾಗಳ ಮೂಲಕವೇ ಡಾರ್ಲಿಂಗ್ ಕೃಷ್ಣ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ.

ಕೌರವ ಪ್ರೊಡಕ್ಷನ್ ಹೌಸ್ ಮತ್ತು ಶಶಾಂಕ್ ಸಿನಿಮಾಸ್ ಬ್ಯಾನರ್ ನಲ್ಲಿ ಬಿಸಿ ಪಾಟೀಲ್ ಹಾಗೂ ನಿರ್ದೇಶಕ ಶಶಾಂಕ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಡಾರ್ಲಿಂಗ್ ಕೃಷ್ಣ ಸೇರಿದಂತೆ ಬೃಂದಾ ಆಚಾರ್ಯ, ಮಿಲನ ನಾಗರಾಜ್, ಸುಧಾ ಬೆಳವಾಡಿ ತೆರೆ ಹಂಚಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read