HomeKarnatakaತಮಿಳುನಾಡಿಗೆ 'ಕಾವೇರಿ' ನೀರು ಬಿಡಲು ಸಾಧ್ಯವಿಲ್ಲ ; ಸಿಎಂ ಸಿದ್ದರಾಮಯ್ಯ ಖಡಕ್ ಮಾತು

ತಮಿಳುನಾಡಿಗೆ ‘ಕಾವೇರಿ’ ನೀರು ಬಿಡಲು ಸಾಧ್ಯವಿಲ್ಲ ; ಸಿಎಂ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೆವು, ತೀರ್ಪು ನೋಡಿದರೆ ನಮ್ಮ ಮನವಿಯನ್ನು ಪರಿಗಣಿಸಿದಂತೆ ಕಾಣುತ್ತಿಲ್ಲ. ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ ಎಂದು ಸಿ.ಡಬ್ಲ್ಯೂ.ಆರ್.ಸಿ ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿ.ಡಬ್ಲ್ಯೂ.ಆರ್.ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಜೊತೆಗೆ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾವೇರಿ ನದಿ ನೀರಿನ” ಕುರಿತು ಸರ್ವಪಕ್ಷಗಳ ಸಭೆ

14ನೇ ತಾರೀಖಿನ ಭಾನುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ” ಕಾವೇರಿ ನದಿ ನೀರಿನ” ಕುರಿತು ಸರ್ವಪಕ್ಷಗಳ ಸಭೆಯನ್ನು ಏರ್ಪಾಡು ಮಾಡಲಾಗಿದೆ. ಈ ಸಭೆಗೆ ರಾಜ್ಯದ ಸರ್ವಪಕ್ಷಗಳ ಸದಸ್ಯರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಾಗಿ ಕಾವೇರಿ ನೀರು ಹಂಚಿಕೆಯಲ್ಲಿ ಉದ್ಭವವಾಗಿರುವ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಸಲಹೆ ನೀಡಬೇಕೆಂದು ಕೋರುತ್ತೇನೆ. ಕರುನಾಡ ಜೀವನದಿ ಕಾವೇರಿಯ ರಕ್ಷಣೆಗಾಗಿ, ನಾಡಿನ ರೈತರ ಹಿತ ಕಾಯುವುದಕ್ಕಾಗಿ ನಿಮ್ಮೆಲ್ಲರ ಸಹಕಾರವಿರಲಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular