
ಕಾವೇರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಬಂದ್ ಇರಲಿದೆ. ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬಂದ್ ಆಗಲಿವೆ. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಗಳ ಒಕ್ಕೂಟ ಸೆ.26ರ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದೆ.

