HomeKarnatakaBIG NEWS : ಮಂಡ್ಯದಲ್ಲಿ 'ಕಾವೇರಿ' ಕಿಚ್ಚು : ನಾಳೆ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ...

BIG NEWS : ಮಂಡ್ಯದಲ್ಲಿ ‘ಕಾವೇರಿ’ ಕಿಚ್ಚು : ನಾಳೆ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೀಗ ಇದೀಗ ರೈತ ಸಂಘಟನೆಗಳು ನಾಳೆ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದೆ.

ತಮಿಳುನಾಡಿನ ಒತ್ತಡಕ್ಕೆ ಮಣಿದು ಕರ್ನಾಟಕ ರಾಜ್ಯ ಸರ್ಕಾರವು ನೀರು ಬಿಡುಗಡೆಗೆ ಆದೇಶಿಸಿದ್ದು, ಒಂದು ವಾರದಿಂದಲೂ ನೀರು ಹರಿಯುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದು, ರಸ್ತೆಯಲ್ಲಿ ಅಡುಗೆ ಮಾಡುವ ಮೂಲಕ ಪ್ರತಿಭಟಿಸಲಿದ್ದಾರೆ. ಈ ಹಿನ್ನೆಲೆ ನಾಳೆ ವಾಹನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ರಾಜ್ಯ ಬಿಜೆಪಿ ಮಂಡ್ಯದ ಸಂಜಯ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆದಿದೆ. ಬಿಜೆಪಿ ಮುಖಂಡ ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಸಂಜಯ್ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯಲ್ಲಿ ಸಂಸದೆ ಸುಮಲತಾ ಮತ್ತಿತರರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular