HomeKarnatakaBIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ 'KRS'...

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ‘KRS’ ಮುತ್ತಿಗೆ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.

ಮುಂದುವರೆದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ , ರ್ಯಾಲಿ ನಡೆಯಲಿದೆ. ನಾಳೆ ಗುರುವಾರ, ಬೆಂಗಳೂರಿಂದ ರ್ಯಾಲಿ ನಡೆಸಲು ಸಜ್ಜಾಗಿರೋ ವಾಟಾಳ್ ಹಾಗೂ ಕನ್ನಡಪರ ಸಂಘಟನೆಗಳು,   ಕೆ ಆರ್ ಎಸ್ ಗೆ   ಮುತ್ತಿಗೆ ಹಾಕಲು ನಿರ್ಧರಿಸಿದೆ.

ಕರ್ನಾಟಕ ಬಂದ್ ಮೂಲಕ ಹೋರಾಟ ನಡೆಸಿದ್ದ ಹೋರಾಟಗಾರರು ಇದೀಗ ಮತ್ತೆ ಕಾವೇರಿಗಾಗಿ ರಣಕಹಳೆ ಮೊಳಗಿಸಲು ಸಜ್ಜಾಗಿ ನಿಂತಿದ್ದಾರೆ. ತಮಿಳುನಾಡಿಗೆ ನೀರು ಬಿಡದಂತೆ ಕೋರಿ ಸರ್ಕಾರ ಈಗಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಪರಿಶೀಲನಾ ಅರ್ಜಿ ಸಲ್ಲಿಸಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular