
ರಾಜಭವನ ಪ್ರವೇಶಿಸಲು ಯತ್ನಿಸಿದ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜಭವನದ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜಭವನ ಪ್ರವೇಶಿಸಲು ಯತ್ನಿಸಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವರು ರಾಜಭವನ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಕರೆ ನೀಡಲಾಗಿದ್ದು, ವಿವಿಧ ಕಡೆ ಪ್ರತಿಭಟನೆ ಹೋರಾಟ ನಡೆಯುತ್ತಿದೆ.

