
ಬೆಂಗಳೂರಿಗೆ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು BWSSB ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತ್ತು, ಇವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆ ಕಾಡನಹಳ್ಳಿ ಬಳಿ ಇರುವ ಪಂಪ್ ಹೌಸ್ ಎದುರು ಬೆಂಗಳೂರಿಗೆ ನೀರು ಹರಿಸದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಟಿ.ಕೆ ಹಳ್ಳಿ ಪಂಪ್ ಹೌಸ್ ಗೆ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಲು ಯತ್ನಿಸಿದೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ನೀರು ಹರಿಸಬೇಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಲ್ಲದೇ ಬೆಂಗಳೂರಿಗೆ ನೀರು ಬಿಟ್ಟರೆ BWSSB ಘಟಕವನ್ನು ಒಡೆದು ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.


