BIG NEWS: ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ!

ಚಾಮರಾಜನಗರ: ಬಿರುಬೇಸಿಗೆ ನಡುವೆಯೇ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚುತ್ತಿವೆ. ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟ ಪ್ರದೇಶಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಕಾವೇರಿ ವನ್ಯಧಾಮದ ಕೊತ್ತನೂರು, ಕೌದಳ್ಳಿ, ಮಹದೇಶ್ವರ ವನ್ಯಧಾಮದ ಹನೂರು ಬಫರ್ ಜೋನ್ ಭಾಗದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಅವಘಡಕ್ಕೆ ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಕಳೆದ ಕೆಲ ದಿನಗಳಿಂದ ಒಂದು ಕಡೆ ಕಾಣಿಸಿಕೊಂಡಿದ್ದ ಬೆಂಕಿ ವ್ಯಾಪಕವಾಗಿ ಹರಡಿದೆ. ಬೆಂಕಿಯ ಕೆನ್ನಾಲಿಗೆಗೆ ವನ್ಯಸಂಪತ್ತು ಸಂಪೂರ್ಣ ನಾಶವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read