HomeKarnatakaಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: HDK ಅಭಿನಂದನಾ ಸಮಾರಂಭದಲ್ಲಿ ನಾರಾಯಣಗೌಡ ಹೊಸ ಬಾಂಬ್

ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: HDK ಅಭಿನಂದನಾ ಸಮಾರಂಭದಲ್ಲಿ ನಾರಾಯಣಗೌಡ ಹೊಸ ಬಾಂಬ್

ಮಂಡ್ಯ: ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಪಾಂಡವಪುರ ಮಾಜಿ ಶಾಸಕ ಕೆ.ಸಿ. ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನಾರಾಯಣಗೌಡ, ಕುಮಾರಣ್ಣ ಮಂಡ್ಯ ಜಿಲ್ಲೆಗೆ ದೊಡ್ಡ ಶಕ್ತಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ತೆಗೆಯುವ ಕೆಲಸ ಶೀಘ್ರವೇ ನಡೆಯಲಿದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕಾಂಗ್ರೆಸ್ ಸರ್ಕಾರ ತೆಗೆಯುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ನಾರಾಯಣ ಗೌಡ, ಸಿದ್ದರಾಮಯ್ಯ ನಾನು ಸತ್ಯ ಹರಿಶ್ಚಂದ್ರ ಎಂದು ಹೇಳಿಕೊಳ್ಳುತ್ತಾರೆ. 15 ಸೈಟುಗಳು ಯಾರದ್ದು ಸ್ವಾಮಿ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರದ ಹಗರಣಗಳು ಬಹಳಷ್ಟು ಇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೂರಾರು ಕೋಟಿ ಲೂಟಿ ಮಾಡಿದ್ರಲ್ಲ, ಹಣ ಲೂಟಿ ಮಾಡುವಾಗ ನೀವು ಕಣ್ಮುಚ್ಚಿ ಕುಳಿತಿದ್ರಾ ಸ್ವಾಮಿ? ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular