ಡಿ. 23ರಿಂದ ‘ಕನ್ನಡ ಚಲನಚಿತ್ರ ಕಪ್’ ಕ್ರಿಕೆಟ್ ಪಂದ್ಯಾವಳಿ

ಬೆಂಗಳೂರು: ಕನ್ನಡ ಚಲನಚಿತ್ರ ಕಪ್(ಕೆಸಿಸಿ) ನಾಲ್ಕನೇ ಸೀಸನ್ ಕ್ರಿಕೆಟ್ ಪಂದ್ಯಾವಳಿ ಡಿಸೆಂಬರ್ 23ರಿಂದ 25ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿವೆ.

ನಟ ಕಿಚ್ಚ ಸುದೀಪ್ ಅವರು ಕ್ರಿಕೆಟ್ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದು, ಕ್ರಿಕೆಟ್ ಕೂಡ ಆಡುತ್ತಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದು, ಸಕ್ರಿಯವಾಗಿ ಭಾಗವಹಿಸುತ್ತಾರೆ. ಸಿನಿಮಾ ಕೆಲಸಗಳಿಗೆ ಕೊಂಚ ವಿರಾಮ ನೀಡಿ ಕೆಸಿಸಿಯಲ್ಲಿ ಭಾಗವಹಿಸಲಿದ್ದಾರೆ.

ನಟರಾದ ಶಿವರಾಜ್ ಕುಮಾರ್, ಉಪೇಂದ್ರ, ಧನಂಜಯ್, ಗಣೇಶ್, ದುನಿಯಾ ವಿಜಯ್ ಮೊದಲಾದವರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

ಡಿ. 23 ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್ ಪಂದ್ಯಾವಳಿ ನಡೆಯುವ ಬಗ್ಗೆ ಸುದೀಪ್ ಮಾಹಿತಿ ನೀಡಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ.

https://twitter.com/KicchaSudeep/status/1727288777025228966

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read