HomeIndiaBIG BREAKING: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾಜಿ ಸಿಎಂ ಪುತ್ರಿ ಕವಿತಾ ಅರೆಸ್ಟ್

BIG BREAKING: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾಜಿ ಸಿಎಂ ಪುತ್ರಿ ಕವಿತಾ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ ಇಡಿ ಅಧಿಕಾರಿಗಳು ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ಬಂಧಿಸಿದ್ದಾರೆ.

ಅವರನ್ನು ಹೈದರಾಬಾದ್ ನಿಂದ ದೆಹಲಿಗೆ ಕರೆದುಕೊಂಡು ಹೋಗಲಾಗಿದೆ. ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ, BRS ಪಕ್ಷದ ನಾಯಕ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ಕೆ ಕವಿತಾ ಅವರನ್ನು ದೆಹಲಿಗೆ ಕರೆತರುತ್ತಿರುವ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆಗೊಳಪಡಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಮಾಜಿ ಸಂಸದೆ ಕವಿತಾ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಆದರೆ, ಸಮನ್ಸ್ ನೀಡಿದರೂ ಕಳೆದ ವರ್ಷ ಅಕ್ಟೋಬರ್‌ನಿಂದ ಆಕೆ ಏಜೆನ್ಸಿಯ ಮುಂದೆ ಹಾಜರಾಗಿರಲಿಲ್ಲ. ಮಹಿಳೆಯೊಬ್ಬರನ್ನು ಇಡಿ ತನ್ನ ಕಚೇರಿಗೆ ಕರೆಸಿರುವುದನ್ನು ಪ್ರಶ್ನಿಸಿ ಕವಿತಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇಂದು ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಅಧಿಕಾರಿಗಳು ಹೈದರಾಬಾದ್‌ ನ ಬಂಜಾರ ಹಿಲ್ಸ್‌ ನಲ್ಲಿರುವ ಕವಿತಾ ನಿವಾಸದಲ್ಲಿ ಶೋಧ ನಡೆಸಿದ್ದಾರೆ. ಬಳಿಕ ಅವರನ್ನು ಬಂಧಿಸಿ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular