ರಜೆ ತೆಗೆದುಕೊಂಡಿದ್ದಕ್ಕೆ ಮ್ಯಾನೇಜರ್ ಕಿರುಕುಳ; ಡೆತ್ ನೋಟ್ ಬರೆದಿಟ್ಟು ಕೆಡಿಡಿಎಲ್ ವಾಚ್ ಕಂಪನಿ ಕಾರ್ಮಿಕ ಆತ್ಮಹತ್ಯೆ

ಬೆಂಗಳೂರು: ವಾಚ್ ತಯಾರಿಕಾ ಕಂಪನಿಯ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕಾರ್ಮಿಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆಡಿಡಿಎಲ್ ವಾಚ್ ತಯಾರಿಕಾ ಕಂಪನಿಯ ಮ್ಯಾನೇಜರ್ ಹಾಗೂ ಸೂಪರ್ ವೈಸರ್ ಕಿರುಕುಳದಿಂದ ನೊಂದು ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿ.ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ರಜೆ ತೆಗೆದುಕೊಂಡಿದ್ದಕ್ಕೆ ಕೆಲಸದಿಂದ ತೆಗೆದುಹಾಕುವುದಾಗಿ ಮ್ಯಾನೇಜರ್ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಮೊಬೈಲ್ ನಲ್ಲಿ ವಾಯ್ಸ್ ರೆಕಾರ್ಡ್ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶ ಮೂಲದ ಗುಡಿಬಂಡೆ ನಿವಾಸಿ 24 ವರ್ಷದ ಗೋವಿಂದ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ 6 ವರ್ಷಗಳಿಂದ ಪೀಣ್ಯದ ಕೆಡಿಡಿಎಲ್ ವಾಚ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಕೆಲಸ ಮುಗಿಸಿ ನಿನ್ನೆ ಮನೆಗೆ ವಾಪಾಸ್ ಆಗಿರುವ ಗೋವಿಂದ, ಅಪಾರ್ಟ್ ಮೆಂಟ್ ನ ಸ್ಟೇರ್ ಕೇಸ್ ಮೆಟ್ಟಿಲಿನ ಕಂಬಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read