ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಅರ್ಹ ಫಲಾನುಭವಿಗಳಿಗೆ ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು(ವಿದ್ಯಾಭ್ಯಾಸ ಸಾಲ), ಸ್ವಾವಲಂಬಿ ಸಾರಥಿ, ಶ್ರಮಶಕ್ತಿ, ವೃತ್ತಿ ಪ್ರೋತ್ಸಾಹ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಗಂಗಾ ಕಲ್ಯಾಣ, ನವೋದಯ, ಫಾಸ್ಟ್ ಫುಡ್ ಟ್ರಕ್/ಕಿಚನ್ ಕಿಯೋಸ್ಕ್, ಅಲ್ಪಸಂಖ್ಯಾತ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಾಹ, ಸಮುದಾಯ ಆಧಾರಿತ ತರಬೇತಿ, ವಿದೇಶಿ ವಿದ್ಯಾಭ್ಯಾಸ ಸಾಲ, ವ್ಯಾಪಾರ–ಉದ್ಯಮಗಳಿಗೆ ನೇರ ಸಾಲ ಹಾಗೂ ಸಾಂತ್ವನ ಸೇರಿದಂತೆ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 17 ಕೊನೆಯ ದಿನವಾಗಿದ್ದು, ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳು https://kmdconline.karnataka.gov.in/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲೇ ಅಪ್‌ಲೋಡ್ ಮಾಡಬೇಕಾಗಿದ್ದು, ಜಿಲ್ಲಾ ಕಚೇರಿಗೆ ಅರ್ಜಿ ಹಾಗೂ ದಾಖಲೆಗಳ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿಲ್ಲ.
ಆಸಕ್ತರು ನಿಗಮದ ನಿಯಮಾನುಸಾರ ಅರ್ಹತೆ ಹಾಗೂ ದಾಖಲೆಗಳ ವಿವರಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮೌಲಾನಾ ಆಜಾದ್ ಭವನ, 1ನೇ ಮಹಡಿ, ಹೊಸಪೇಟೆ ರಸ್ತೆ, ಕೊಪ್ಪಳ ಅಥವಾ ದೂರವಾಣಿ: 08539–225008 ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

