HomeKarnatakaಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಈಶ್ವರಪ್ಪ ಪುತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿ

ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಈಶ್ವರಪ್ಪ ಪುತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿ

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕೆ.ಈ. ಕಾಂತೇಶ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಹಾವೇರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಪುತ್ರ ಕೆ.ಈ. ಕಾಂತೇಶ್ ಅಪೇಕ್ಷೆ ಹೊಂದಿದ್ದಾರೆ. ಪಕ್ಷದ ನಾಯಕರು ಟಿಕೆಟ್ ನೀಡುವಾಗ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾವೇರಿ ಸಂಸದ ಶಿವಕುಮಾರ ಉದಾಸಿ ವೈಯಕ್ತಿಕ ಕಾರಣಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದು, ಕಾಂತೇಶ್ ಹಾವೇರಿಯಿಂದ ಸ್ಪರ್ಧಿಸಲು ಬಯಸಿದ್ದಾರೆ. ಹಲವು ನಾಯಕರು ಹಾಗೂ ಮುಖಂಡರಿಗೂ ಕಾಂತೇಶ್ ಸ್ಪರ್ಧಿಸಲಿ ಎಂಬ ಬಯಕೆ ಇದೆ. ಕಾಂತೇಶ್ ಕೂಡ ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular